ಮಂಗಳೂರು, ಸೆ 3 (DaijiworldNews/MS): ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯನ್ನು ಸೆ. 3ರ ಶುಕ್ರವಾರ ಅಳಿವೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರು, ಅಧಿಕಾರಿಗಳು ಈ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ಸಚಿವರು ಈ ಸಂದರ್ಭದಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ತಾಂತ್ರಿಕತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು