ಮಂಗಳೂರು, ಸೆ 04(DaijiworldNews/MS): ಪ್ರವಾಸಿಗರ ಅನುಕೂಲಕ್ಕಾಗಿ ತಣ್ಣೀರುಬಾವಿ, ಪಣಂಬೂರು ಹಾಗೂ ಸುರತ್ಕಲ್ ಇಡ್ಯ ಕಡಲ ಕಿನಾರೆಯಲ್ಲಿ ಕೈಗೊಳ್ಳಬಹುದಾದ ವಿವಿಧ ಮೂಲಭೂತ ಸೌಕರ್ಯಾಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸೆ. 3ರ ಶುಕ್ರವಾರ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಸಿಎಸ್ ಆರ್ ನಿಧಿಯಡಿ ನಿರ್ಮಿಸಲಾದ ಶೌಚಾಲಯಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು, ಮೂರು ಬೀಚ್ ಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಶಾಸಕರಾದ ಭರತ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಕೆಆರ್ ಐ ಡಿ ಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಸದಾಶಿವಯ್ಯ, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕ ಮಹೇಶ್ ಹಾಗೂ ನಿರ್ಮಿತಿ ಕೇಂದ್ರದ ಕಿರಿಯ ಇಂಜಿನಿಯರ್ ನವೀತ್ ಅವರೊಂದಿಗೆ ಚರ್ಚಿಸಿದರು.