ಕಡಬ, ಸೆ. 04 (DaijiworldNews/PY): ಕಡಬ ಠಾಣಾ ಎಸ್.ಐ ರುಕ್ಮ ನಾಯ್ಕ್ ಸಂಚರಿಸುತ್ತಿದ್ದ ಬೊಲೆರೋ ವಾಹನ ಹಾಗೂ ಖಾಸಗಿ ಬೊಲೆರೋ ಮುಖಾಮುಖಿ ಢಿಕ್ಕಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಕಳಾರ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಎರಡು ವಾಹನಗಳು ನಜ್ಜುಗುಜ್ಜಾಗಿದೆ.
ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.