ಮಂಗಳೂರು, ಸೆ. 06 (DaijiworldNews/SM): ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ದ.ಕ. ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ದ. ಕ. ಜಿಲ್ಲೆಯ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ಇತ್ತೀಚಿಗೆ ನಿಫಾ ವೈರಸ್ ಗೆ ಕೇರಳದಲ್ಲಿ 12 ವರ್ಷದ ಬಾಲಕ ಮೃತ ಹಿನ್ನೆಲೆಯಲ್ಲಿ ದ.ಕ ಜಿಲ್ಲೆ ಗಡಿ ಭಾಗದಲ್ಲಿ ಬರುವ ಹಿನ್ನೆಲೆ ಜಾಗೃತ ವಹಿಸಲು ಸೂಚನೆ ನಡೆಸಲಾಗಿದೆ.
ಸಾರ್ವಜನಿಕರು ಈ ಬಗ್ಗೆ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಯಿಂದ ಸೂಚನೆ ನೀಡಲಾಗಿದೆ. ಈ ಬಗ್ಗೆ ಜಿಲ್ಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ. ಅವರು ನಿಫಾ ಅಲರ್ಟ್ ಘೋಷಣೆ ಮಾಡಲಾಗಿದೆ.