ಬಂಟ್ವಾಳ, ಸೆ. 07 (DaijiworldNews/PY): ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿರುವ ಸಂತ್ರಸ್ತೆ ಬಾಲಕಿ, ಬಿ.ಸಿ ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು, ಇದರಿಂದ ಘಟನೆ ಬೆಳಕಿಗೆ ಬಂದಿದೆ.
ಆರೋಪಿ ಮಸೂದ್ ಎಂಬಾತ ಬಾಲಕಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದು, ಬಳಿಕ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ ಬಂದು ಅತ್ಯಾಚಾರ ಎಸಗಿದ್ದಾನೆ. ನಂತರ ಆರೋಪಿ ನಾಪತ್ತೆಯಾಗಿದ್ದಾನೆ.
ಇದೀಗ ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದಾನೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆರೋಪಿಗಾಗಿ ಶೋಧ ಮುಂದುವರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.