ಪುತ್ತೂರು, ಸೆ 8 (DaijiworldNews/MS): ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಕಬಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಬಕ ನಿವಾಸಿಗಳಾದ ನೌಶದ್ , ಮಹಮ್ಮದ್ ಹಾರಿಸ್, ಮಹಮ್ಮ ತೌಸೀಪ್ , ಸಂಶುದ್ದೀನ್ ಅವರು ಬಂಧಿತರು. ಇವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರೂ 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಅರ್ಜಿಯನ್ನು ತಿರಸ್ಕರಿಸಿತ್ತು.
ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಮತ್ತು ಪುತ್ತೂರು ಡಿವೈಎಸ್ಪಿ ಡಾ| ಗಾನ ಪಿ. ಕುಮಾರ್ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸ್ ಇನ್ ಸ್ಪೆಕ್ಟರ್ ಗೋಪಲ್ ನಾಯ್ಕ ಮತ್ತು ಎಸ್.ಐ ಸುತೇಶ್ ನೇತೃತ್ವದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.