ಸುಳ್ಯ, ಸೆ. 08 (DaijiworldNews/PY): ಜಿ.ಪಂ. ಮಾಜಿ ಸದಸ್ಯೆ ಸರಸ್ವತಿ ಕಾಮತ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಇತರ 14 ಮಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
2014ರ ಲೋಕಸಭಾ ಚುನಾವಣೆಯ ವೇಳೆ ಸರಸ್ವತಿ ಕಾಮತ್ ಅವರು ನೆಲ್ಲೂರು ಕೆಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಹಾಗೂ ಇತರ 14 ಮಂದಿಯ ಗುಂಪು ಸರಸ್ವತಿ ಕಾಮತ್ ಅವರ ಮೇಲೆ ಹಲ್ಲೆ ಹಾಗೂ ಮಾನಭಂಗ ಮಾಡಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು,
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಜೆಎಂಎಫ್ಸಿ ಕೋರ್ಟ್ನ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್.ಎ ಅವರು ಆರೋಪಿಗಳಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿದ್ದಾರೆ.
ಹರೀಶ್ ಕಂಜಿಪಿಲಿ, ಹರೀಶ್ ಕಾಯಿಪಳ್ಳ, ಈಶ್ವರಪ್ಪ ಗೌಡ ಹರ್ಲಡ್ಕ, ರವಿಚಂದ್ರ ಕೊಡಪಾಲ, ಸವಿನ್ ಕೆ.ಬಿ., ದಿವಾಕರ್ ನಾಯಕ್ ಎರ್ಮೆಟ್ಟಿ, ದಿನೇಶ್ ಚೆಮ್ನೂರು, ರಾಮಚಂದ್ರ ಹಲ್ದಡ್ಕ, ಷಣ್ಮುಖ ಸೂಟಗದ್ದೆ, ಧನಂಜಯ ಬಲ್ಕಾಡಿ, ಬಾಲಕೃಷ್ಣ ಕಂಜಿಪಿಲಿ, ಮನು ಯಾನೆ ಮನೋಹರ ಪುರ, ದೀಪಕ್ ಎಲಿಮಲೆ, ಮನೋಜ್ ಗಟ್ಟಿಗಾರು, ವಿಕಾಸ್ ಯಾನೆ ವಿಶ್ವನಾಥ ಪ್ರಕರಣದ ಆರೋಪಿಗಳಾಗಿದ್ದಾರೆ.