ಮಂಗಳೂರು, ನ 02(SM): ಸುರತ್ಕಲ್ನಲ್ಲಿ ಟೋಲ್ಗೇಟ್ ರದ್ದುಪಡಿಸಿಬೇಕೆಂದು ಕಳೆದ 2 ವಾರಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ನವಂಬರ್ 1ರ ಗುರುವಾರ ಸಂಜೆ ಸಚಿವ ಖಾದರ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಅದರ ಮುಂದುವರೆದ ಭಾಗವಾಗಿ ನವಂಬರ್ 2ರ ಶುಕ್ರವಾರದಂದು ದ.ಕ. ಜಿಲ್ಲಾಧಿಕಾಗಳ ಕಚೇರಿಯಲ್ಲಿ ಡಿಸಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ವಿಶೇಷ ಸಭೆ ಜರಗಿತು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಅವರ ಸಮ್ಮುಖದಲ್ಲಿ ಟೋಲ್ಗೇಟನ್ನು ರದ್ದು ಪಡಿಸುವ ಕುರಿತಂತೆ ಚರ್ಚೆ ನಡೆಸಲಾಯಿತು.
ಟೋಲ್ಗೇಟನ್ನು ರದ್ದು ಪಡಿಸುವಂತೆ ಸೂಚನೆ ನೀಡಿದ ಸಚಿವ ಯು.ಟಿ. ಖಾದರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆದರೆ, ಎನ್ಎಚ್ ಅಧಿಕಾರಿಗಳು ಮಾತ್ರ ಇದು ತಾಂತ್ರಿಕ ಸಮಸ್ಯೆ. ಕೇಂದ್ರ ಸಾರಿಗೆ ಇಲಾಖೆ ಇದನ್ನು ನಿರ್ಧರಿಸಬೇಕು ಎಂದು ತಮ್ಮ ಮೇಲಿನ ಹೊರೆಯನ್ನು ಇಳಿಸಿಕೊಂಡರು.
ಇನ್ನು ಇದೇ ಸಂದರ್ಭದಲ್ಲಿ ಟೋಲ್ ಗೇಟ್ ರದ್ದು ಮಾಡಲು ರೀಜನಲ್ ಕಚೇರಿ ಮೂಲಕ ಕೇಂದ್ರ ಸಾರಿಗೆ ಇಲಾಖೆಗೆ ಪತ್ರ ಬರೆಯುವಂತೆ ಸಚಿವ ಖಾದರ್, ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮೊದಲಾದವರು ಎನ್ಎಚ್ ಅಧಿಕಾರಿಗಳ ಕಾರ್ಯವೈಖರಿಯನ್ನು ಖಡಿಸಿ ಅವರನ್ನು ತರಾಟೆಗೆ ತೆಗೆದುಕೊಂಡರು.