ಮಂಗಳೂರು, ನ03(SS): ನಗರದ ಸುರತ್ಕಲ್ ಸಮೀಪ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಸುರತ್ಕಲ್ನಲ್ಲಿ ನಡೆಯುತ್ತಿದ್ದ ಅನಿರ್ಧಿಷ್ಟಾವಧಿ ಧರಣಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಉಡುಪಿ ಬಳಿಯ ಹೆಜಮಾಡಿ, ಸುರತ್ಕಲ್ ಮತ್ತು ಕೇರಳ ಗಡಿಭಾಗ ತಲಪಾಡಿ ಹೀಗೆ ಕೇವಲ 45 ಕಿಮೀ ಅಂತರದಲ್ಲಿ 3 ಕಡೆ ಸುಂಕ ವಸೂಲಿ ಮಾಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಸತತ 11 ದಿನಗಳಿಂದ ಅಹೋರಾತ್ರಿ ಧರಣಿ ಮುಂದುವರೆದಿತ್ತು.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮಾತ್ರವಲ್ಲ ನ್ಯಾಯ ದೊರಕಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಧರಣಿಯನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ.
ಸಚಿವ ಖಾದರ್ ಪ್ರತಿಭಟನಾಕಾರರ ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದು ಕೇಂದ್ರ ಸರಕಾರಕ್ಕೆ ಒತ್ತಡ ತರುವ ಕೆಲಸ ಮಾಡುತ್ತೇನೆ ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ.