ಪುತ್ತೂರು, ಸೆ. 10 (DaijiworldNews/PY): 19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕಾ ಯಾನೆ ಕಲಂದರ್ ಸಿದ್ದಿಕ್ (41) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿಯ ಮೇಲೆ ವಾರಂಟ್ ಜಾರಿಗೊಳಿಸಿತ್ತು.
ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಈತ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪುತ್ತೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ.