ಹಾಸನ, ನ03(SS): ರಾಜ್ಯ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಜೊತೆಗಿನ ಮೈತ್ರಿ 2019ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ. ಕಾಂಗ್ರೆಸ್ ಜೊತೆಗಿನ ಮೈತ್ರಿ 2019ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಆನ್'ಲೈನ್ ಮದ್ಯ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆನ್'ಲೈನ್ ಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಈ ರೀತಿಯ ಬೆಳವಣಿಗೆಗಳು ಯುವ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಭವಿಷ್ಯದಲ್ಲಿ ಆನ್'ಲೈನ್ ಮದ್ಯ ಮಾರಾಟವನ್ನು ನಿಷೇಧ ಮಾಡುವ ಕುರಿತು ಚಿಂತನೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೆಚ್.ಡಿ.ಕುಮಾರಸ್ವಾಮಿಯ ತಿಳಿಸಿದ್ದಾರೆ.