ಪುತ್ತೂರು, ನ 04 (MSP): ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಾಮೀನು ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ನ್ಯಾಯಾಂಗ ಬಂಧನದಲ್ಲಿರುವ ಚೈತ್ರ ಹಾಗೂ ಆಕೆಯ ತಂಡ ಇತರ ಆರು ಸದಸ್ಯರನ್ನು ಸೋಮವಾರ ಪುತ್ತೂರು ನ್ಯಾಯಾಲಯದಲ್ಲಿ ಹಾಜರುಪಡಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಚೈತ್ರಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುರಿತು ವಿವರಣೆ ನೀಡುವಂತೆ ಮಂಗಳೂರು ಜೈಲು ಅಧೀಕ್ಷಕ ಪರಮೇಶ್ವರ್ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಮೇಲ್ನೋಟಕ್ಕೆ ಆರೋಗ್ಯವಾಗಿದ್ದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚೈತ್ರಾ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪ್ರಶ್ನಿಸಿದ ನ್ಯಾಯಾಧೀಶರು ಚೈತ್ರಾ ಹಾಗೂ ಉಳಿದ ಆರು ಮಂದಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಜೈಲು ಸೂಪರಿಟೆಂಡೆಂಟ್ ನ್ನು ನ.5 ರಂದು ಚಿಕಿತ್ಸೆ ಬಗ್ಗೆ ನ್ಯಾಯಾಲಯಕ್ಕೆ ವಿವರ ಸಲ್ಲಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ.
ಇನ್ನೊಂದೆಡೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಮತ್ತು ಚೈತ್ರಾ ಕುಂದಾಪುರ ತಂಡಗಳ ನಡುವೆ ನಡೆದ ಘರ್ಷಣೆ ಪ್ರಕರಣದಲ್ಲಿ ಆ.31 ರಲ್ಲಿ ಬಂಧಿತನಾಗಿದ್ದ ಗುರುಪ್ರಸಾದ್ ಪಂಜ ಅವರಿಗೆ ಸುಳ್ಯ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.