ಬಂಟ್ವಾಳ, ಸೆ 13 (DaijiworldNews/MS): ಯುವಕನೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವು ಸಮೀಪದ ಕೊಡ್ಯಮಲೆ ಅರಣ್ಯಪ್ರದೇಶದಲ್ಲಿ ನಡೆದಿದೆ. ರಫೀಕ್ (26) ಎಂಬಾತ ಕೊಲೆಯಾದ ಯುವಕ.
ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.