ಸುಳ್ಯ, ಸೆ 14 (DaijiworldNews/MS): ಅಪ್ರಾಪ್ತ ಬಾಲಕಿಯೊಂದಿಗೆ ಸಲಿಗೆ ಬೆಳೆಸಿ , ಪ್ರೀತಿಯ ನಾಟಕವಾಡಿ ಬಳಿಕ ಅತ್ಯಾಚಾರ ನಡೆಸಿದ್ದಾನೆಂಬ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.
ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಬಂಧಿತ ಆರೋಪಿ. ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯಿಸಿಕೊಂಡ ಜಿತೇಶ್ ಆಕೆಯ ಜತೆ ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದನೆನ್ನಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯ ಮನೆಯವರು ಸುಳ್ಯ ಪೋಲೀಸರಿಗೆ ದೂರು ನೀಡಿದ್ದು ಪೊಲೀಸರು ಸೆ ೧೩ ರಂದು ಜಿತೇಶ್ನನ್ನು ಅಡ್ಕಾರ್ ಬಳಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ.
ವಿದ್ಯಾರ್ಥಿನಿಯನ್ನು ಕರೆದೊಯ್ಯುತ್ತಿದ್ದ ಕಾರನ್ನು ಕೂಡಾ ಯುವಕನಿಂದ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.