ಮಂಗಳೂರು, ಸೆ.16 (DaijiworldNews/PY): ಮಂಗಳೂರು ವಿಶ್ವವಿದ್ಯಾನಿಲಯವು ಸೆ. 30 ರಿಂದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್ನ ಪರೀಕ್ಷೆಗಳನ್ನು ಸರಕಾರ ಸೂಚಿಸಿರುವ ಕೊರೊನಾ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ.
"ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಗಳಿಗೆ ಹಾಜರಾಗಬಹುದು. ಪರೀಕ್ಷಾ ಶುಲ್ಕ ಮತ್ತು ಪರೀಕ್ಷಾ ನೋಂದಣಿಗೆ ಸಂಬಂಧಿಸಿದಂತೆ ಆಯಾಯ ಕಾಲೇಜುಗಳಿಂದ ಮಾಹಿತಿಯನ್ನು ಪಡೆದುಕೊಳ್ಳಬೇಕು" ಎಂದು ತಿಳಿಸಿದೆ.
"ಸೆಪ್ಟೆಂಬರ್ 27 ರಿಂದ 1, 3, 5 ಮತ್ತು 7ನೇ ಸೆಮಿಸ್ಟರ್ಗೆ ನಡೆದಿರುವ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರಾರಂಭಿಸಲಾಗುವುದು. ಬಾಕಿ ಇರುವ ವಿದ್ಯಾರ್ಥಿಗಳಿಗೆ, ಕೊರೊನಾ ಬಾಧಿತರಿಗೆ ಹಾಗೂ ಪ್ರಯಾಣದ ತೊಂದರೆ ಉಂಟಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು" ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಎಲ್ ಧರ್ಮ ಮಾಹಿತಿ ನೀಡಿದ್ದಾರೆ.