ಉಡುಪಿ, ಸೆ 18 (DaijiworldNews/MS): ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೊರಡಿಸಿದ ಆದೇಶದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತತ್ ಕ್ಷಣದಿಂದ ಜಾರಿಗೆ ಬರುವಂತೆ ರಮೇಶ್ ಕಾಂಚನ್ ಅವರನ್ನು ನೇಮಿಸಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಡಿ.ಕೆ.ಶಿವಕುಮಾರ್ ರಮೇಶ್ ಕಾಂಚನ್ ಅವರಿಗೆ ಪಕ್ಷ ಕಟ್ಟುವ ಮತ್ತು ಪಕ್ಷದ ಸಂಘಟನೆಯ ಜವಾಬ್ದಾರಿಯನ್ನು ವಹಿಸಿದ್ದಾರೆ. ರಮೇಶ್ ಕಾಂಚನ್ ಪ್ರಸ್ತುತ ಉಡುಪಿ ನಗರಸಭೆಯಲ್ಲಿ ಬೈಲೂರು ವಾರ್ಡ್ ಅನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ನಗರಸಭೆಯ ಪ್ರತಿಪಕ್ಷ ನಾಯಕರಾಗಿಯೂ ಅವರು ಕಾರ್ಯನಿರ್ವಹಿಸುತಿದ್ದಾರೆ.
ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ನಲ್ಲಿ ಪ್ರಮುಖ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದು, ಹಲವಾರು ಸಾರ್ವಜನಿಕ ಚಳವಳಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಲ್ಲಿ ಸದಾ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಾರೆ.