ಬೆಂಗಳೂರು, ನ06: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನವನ್ನು ಬಿಜೆಪಿಯವರು ಇನ್ನೂ ಬಿಟ್ಟಿಲ್ಲ ಎಂದು ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಚುನಾವಣೆಯಲ್ಲೂ ನಮ್ಮನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿಯವರು ಮಾಡಿದ್ದಾರೆ. ಮಾತ್ರವಲ್ಲ, ಸೂಟ್ಕೇಸ್ ಹಿಡಿದುಕೊಂಡೇ ಕಾಂಗ್ರೆಸ್ - ಜೆಡಿಎಸ್ ಪಕ್ಷದ ಕೆಲವು ಶಾಸಕರನ್ನು ಖರೀದಿಸುವ ಯತ್ನವನ್ನೂ ಬಿಜೆಪಿಯವರು ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಪಕ್ಷದವರು ನಿನ್ನೆಯವರೆಗೂ ನಮ್ಮ ಕಡೆಯ ಕೆಲವು ಶಾಸಕರನ್ನು ಭೇಟಿ ಮಾಡಿದ್ದಾರೆ. ಮಾತ್ರವಲ್ಲ, ಈಗಾಗಲೇ ಕೆಲವರ ಬ್ಯಾಂಕ್ ಖಾತೆಗೆ ಹಣ ಕೂಡ ವರ್ಗಾಯಿಸಿದ್ದಾರೆ ಎಂದು ಹೇಳಿದರು.
ಕೆಲವು ಶಾಸಕರು ಬಿಜೆಪಿಯ ಅವಕಾಶವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇನ್ನು ಕೆಲವರು ಸಮಯ ಪಡೆದಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಶಾಕ್ ನ್ಯೂಸ್ ಹೊರ ಹಾಕಿದ್ದಾರೆ.