ಮಂಗಳೂರು, ಸೆ. 19 (DaijiworldNews/HR): ಹಿಂದೂ ಮಹಾಸಭಾದ ಸದಸ್ಯರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಮೈಸೂರಿನಲ್ಲಿ ದೇವಸ್ಥಾನವನ್ನು ಕೆಡವಿದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ ಆರೋಪದ ಬಳಿಕ ಪೊಲೀಸರು ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಉಳಿದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಮುಖ್ಯ ಕಾರ್ಯದರ್ಶಿ ಧರ್ಮೇಂದ್ರ ಅವರು, "ನಾವು ಗಾಂಧಿಯನ್ನೇ ಬಿಟ್ಟಿಲ್ಲ ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧಿಯನ್ನೇ ಬಿಟ್ಟಿಲ್ಲ. ಇನ್ನು ನಿಮ್ಮನ್ನು ಬಿಡುತ್ತೇವಾ?. ಬಿಜೆಪಿ ಒಂದು ಬೆನ್ನುಮೂಳೆ ಇಲ್ಲದ ಸರ್ಕಾರ. ಇವರಿಗಿಂತ ತಾಲಿಬಾನ್ಗಳು ವಾಸಿ. ಇವರ ಸರ್ಕಾರ ತಾಲಿಬಾನ್ಗಳಿಗಿಂತ ಕೀಳು" ಎಂದಿದ್ದರು.
ಪತ್ರಿಕಾಗೋಷ್ಠಿಯ ಬಳಿಕ ಎಚ್ಎಂಎಸ್ ರಾಜ್ಯಾಧ್ಯಕ್ಷ ಲೋಹಿತ್ ಕುಮಾರ್ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿದ್ದಕ್ಕಾಗಿ ಮತ್ತು ಸಿಎಂ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಧರ್ಮೇಂದ್ರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ, ಬರ್ಕೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.