ಬೆಳ್ತಂಗಡಿ, ಸೆ 21(DaijiworldNews/MS): ಕಳಿಯ ಗ್ರಾಮದ ಪರಪ್ಪುವಿನಲ್ಲಿ ಸೆ.20 ರಂದು ಬೆಳ್ತಂಗಡಿ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್ ನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ 55 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಇಳಂತಿಲ ಗ್ರಾಮದ ನಿವಾಸಿ ಮುಹಮ್ಮದ್ ಶಾಫಿ (29) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಪಿಎಸ್ಐ ನಂದಕುಮಾರ್ ನೇತೃತ್ವದ ತಂಡ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ತಡೆದು ಪರಿಶೀಲಿಸಿದ್ದು, ಈ ವೇಳೆ ಗಾಂಜಾ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.