ಮಂಗಳೂರು, ಸೆ 21(DaijiworldNews/MS): ದುಬೈಯಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕನೋರ್ವವನ್ನು ವಶಕ್ಕೆ ಪಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ 418 ಗ್ರಾಂ ತೂಕದ 19,89,680 ರೂ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಸೆ. 19ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಆಗಮಿಸಿದ ಈತ ಪೇಸ್ಟ್ ಹಾಗೂ ಕ್ಯಾಪ್ಸೂಲ್ ರೂಪದಲ್ಲಿ ಪ್ಯಾಕ್ ಮಾಡಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಮೂರು ದಿನಗಳ ಅಂತರದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 70 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.