ಬಂಟ್ವಾಳ, ಸೆ. 21 (DaijiworldNews/SM): ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ಬಾಲ್ಯ ವಿವಾಹ ನಡೆದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸೆ.21ರಂದು ಸಂಜೆ ದೂರು ದಾಖಲಾಗಿದೆ.
ತುಂಬೆಯ ದೇವಸ್ಥಾನವೊಂದರಲ್ಲಿ ಅಪ್ರಾಪ್ತ ಬಾಲಕನಿಗೆ ವಿವಾಹ ನಡೆದಿದೆ ಎಂಬ ದೂರುಗಳು ಅಧಿಕಾರಿಗಳಿಗೆ ಬಂದ ಹಿನ್ನೆಲೆಯಲ್ಲಿ ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.