ಕಾಸರಗೋಡು, ನ 07(SM): ಕಾಸರಗೋಡಿನ ಕೂಡ್ಲು ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ವಿಚಾರಣೆಗೆ ಹಾಜರಾಗದ ಇಬ್ಬರು ಆರೋಪಿಗಳಿಗೆ ಕಾಸರಗೋಡು ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದೆ.
ತಮಿಳುನಾಡು ಪಳನಿಯ ದಿಲ್ಸಾಂತ್(24) ಹಾಗೂ ಸುಮಾ(35) ವಿರುದ್ಧ ಕೋರ್ಟ್ ಅರೆಸ್ಟ್ ವಾರಂಟ್ ಹೊರಡಿಸಿದೆ. ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿರುವುದರಿಂದ ಬಂಧಿಸಲು ಸಾಧ್ಯವಾಗಿಲ್ಲ ಎಂಬ ಪೊಲೀಸ್ ವರದಿ ಹಿನ್ನಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.
ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿ ಉಳಿಯತ್ತಡ್ಕದ ಹರ್ಷಾದ್ ಪುಳ್ಕೂರು(24) ಈ ಹಿಂದೆ ನ್ಯಾಯಾಲಯಕ್ಕೆ ಶರಣಾಗಿದ್ದ. ಹತ್ತಕ್ಕೂ ಅಧಿಕ ಆರೋಪಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
ಇದೀಗ ನ್ಯಾಯಾಂಗ ಬಂಧನದಲ್ಲಿರುವ ಹಾಗೂ ಜಾಮೀನಿನಲ್ಲಿ ಬಿಡುಗಡೆಗೊಂಡಿರುವ ಆರೋಪಿಗಳು ನವಂಬರ್ ೧೪ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಯಲಯ ಆದೇಶ ನೀಡಿದೆ.
2015ರ ಸೆಪ್ಟೆಂಬರ್ 7ರಂದು ಎರಿಯಾಲ್ ನಲ್ಲಿರುವ ಕೂಡ್ಲು ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ದರೋಡೆ ನಡೆದಿತ್ತು. ಹದಿನೇಳೂವರೆ ಕಿಲೋ ಚಿನ್ನಾಭರಣ, 12 ಲಕ್ಷ ರೂಪಾಯಿ ನಗದನ್ನು ಆರೋಪಿಗಳು ದರೋಡೆ ಮಾಡಿದ್ದರು.