ಮಂಗಳೂರು, ಸೆ 25 (DaijiworldNews/MS): ಇಂಡಿಯನ್ ಪ್ರೀಮಿಯರ್ ಲೀಗ್ ನ ಹೈವೋಲ್ಟೆಜ್ ಪಂದ್ಯಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಶುಕ್ರವಾರ ಶಾರ್ಜಾದಲ್ಲಿ ನಡೆಯಿತು.
ಐಪಿಎಲ್ ವೀಕ್ಷಿಸಲು ಈ ಬಾರಿ ಮೈದಾನದಲ್ಲಿ ಪ್ರೇಕ್ಷಕರಿಗೆ ಸೀಮಿತ ಸಂಖ್ಯೆಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ತಮ್ಮ ನೆಚ್ಚಿನ ಫ್ರಾಂಚೈಸಿಯನ್ನು ಬೆಂಬಲಿಸುತ್ತಾ ಅಭಿಮಾನಿಗಳು ಪಂದ್ಯವನ್ನು ಆನಂದಿಸುತ್ತಾರೆ. ಅದರಂತೆಯೇ ಶಾರ್ಜಾದ ಐಪಿಎಲ್ ಮೈದಾನದಲ್ಲಿ ಕರಾವಳಿಯ ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ಹುರಿದುಂಬಿಸುತ್ತಾ ಪಿಲಿನಲಿಕೆಗೆಗೆ ಹೆಜ್ಜೆ ಹಾಕಿದ ವಿಡಿಯೋ ವೈರಲ್ ಆಗಿದೆ.
ಆರ್ ಸಿಬಿ - ಸಿಎಸ್ ಕೆ ಪಂದ್ಯದ ವೇಳೆ ಹುಲಿ ಕುಣಿತದ ಹಾಡಿಗೆ ಆರ್ ಸಿಬಿ ಅಭಿಮಾನಿಗಳು ಮನಸೋ ಇಚ್ಛೆ ಕುಣಿದಿದ್ದಾರೆ. ಯುವಕರು- ಯುವತಿಯರು ಸೇರಿದಂತೆ ಆರ್ ಸಿಬಿ ಅಭಿಮಾನಿಗಳು ಹುಲಿ ಕುಣಿತವಾಡಿದ ವಿಡಿಯೋ ವೈರಲ್ ಆಗಿದೆ.
ಅಂದ ಹಾಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರನ್ನು 6 ವಿಕೆಟ್ಗಳಿಂದ ಸೋಲಿಸಿದ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಆಟ ಪ್ರದರ್ಶಿಸಿ ಅಂಕಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಮರಳಿದೆ.