ಬಂಟ್ವಾಳ, ಸೆ. 27 (DaijiworldNews/SM): ಖಾಸಗಿ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯೋರ್ವಳಿಗೆ ಗಂಡಸರಿಬ್ಬರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ಘಟನೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ ಪರಸ್ಪರ ವಾಗ್ವಾದ ನಡೆದಿದೆ. ಈ ವೇಳೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವೀಡಿಯೋವನ್ನು ಕೂಡ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.
ಅವಾಚ್ಯ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ಮಹಿಳೆಯ ಸಹೋದರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ್ದಾರೆ.