ಕಾಸರಗೋಡು, ಸೆ.29 (DaijiworldNews/PY): ಬಸ್ಸು ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಮೂಕಂಪಾರೆಯ ರಾಜೇಶ್ (35) ಮೃತಪಟ್ಟವರು. ಕಾಸರಗೋಡು - ತಲಪಾಡಿ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಸು ಚಾಲಕರಾಗಿದ್ದರು.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃತ್ಯ ನಡೆಸಿದ್ದು, ಪರಿಸರವಾಸಿಗಳು ಮನೆಗೆ ಬಂದ ಸಂದರ್ಭದಲ್ಲಿ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪರಿಸರವಾಸಿಗಳು ಕೆಳಗಿಳಿಸಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು. ರಾಜೇಶ್ ಕೆಲ ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದುಕೊಂಡಿದ್ದರು.
ಘಟನೆಯ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.