ಮಂಗಳೂರು,ನ 09 (MSP): ಕೇಂದ್ರ ಸರಕಾರ 2016ರ ನವೆಂಬರ್ 8 ರಂದು ನೋಟು ಅಮಾನ್ಯಗೊಳಿಸಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೋಟ್ ಬ್ಯಾನ್ ವಿರುದ್ಧ ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಭಾಗವಹಿಸಿ ಕೇಂದ್ರ ಸರಕಾರದ ವಿರುದ್ಧ ಟೀಕೆಯ ಸುರಿಮಳೆಗೈಯ್ದರು. ನೋಟ್ ಬ್ಯಾನ್ ನಿಂದಾಗಿ ದೇಶಕ್ಕೆ ಅನುಕೂಲವಾಗುತ್ತದೆ. ದೇಶದ ಆರ್ಥಿಕ ಪ್ರಗತಿಯಾಗುತ್ತದೆ. ಎಂಬುವುದಾಗಿ ಸುಳ್ಳು ಭರವಸೆಗಳನ್ನು ಕೇಂದ್ರ ಸರಕಾರ ನೀಡಿದೆ. ಆದರೆ ಇದುವರೆಗೂ ಯಾವುದೇ ಭರವಸೆಗಳು ಈಡೇರಿಲ್ಲ ಎಂದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಶಾಸಕ ಜೆ.ಆರ್. ಲೋಬೊ,ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಮೇಯರ್ ಕವಿತಾ ಸನಿಲ್, ಜಿ.ಪಂ ಸದಸ್ಯೆ ಮಮತಾ ಗಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.