ಮಂಗಳೂರು, ಸೆ. 30 (DaijiworldNews/SM): ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಬಿಲ್ ವಿತರಣೆ ವಿಚಾರಕ್ಕೆ ಸಬಂಧಿಸಿದಂತೆ ಹಲವು ಚರ್ಚೆಗಳು ವಿರೋಧಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹೊರೆಯಾಗುವ ರೀತಿಯಲ್ಲಿ ಬಿಲ್ ವಿಧಿಸುವುದಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ತಿ ಹೇಳಿದ್ದಾರೆ.
ಪಾಲಿಕೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಹೊರೆಯಾಗದ ರೀತಿಯಲ್ಲಿ ನೀರಿನ ಬಿಲ್ ಸಂಗ್ರಹ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಜನಸಾಮಾನ್ಯರಿಗೆ ಹೊರೆಯಾಗದಂತೆ ನೀರಿನ ಬಿಲ್ ವಿಧಿಸಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಅವರು ಭರವಸೆ ನೀಡಿದ್ದಾರೆ.