ಕೊಡಗು, ನ10(SS): ರಾಜ್ಯ ಸರ್ಕಾರ ಆಯೋಜಿಸಿರುವ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ, ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಕೊಡಗು ಬಂದ್ಗೆ ಕರೆ ನೀಡಿದೆ. ಪರಿಣಾಮ, ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಕಳೆದ ವರ್ಷ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ವೇಳೆ ಪ್ರತಿಭಟನೆಯು ಭಾರಿ ಹಿಂಸಾರೂಪಕ್ಕೆ ತಿರುಗಿತ್ತು. ಕೊಡಗಿನಲ್ಲಿ ಕೆಲವು ಸಂಘಟನೆಗಳು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದರೆ, ಮತ್ತೆ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ಒಂದು ರೀತಿಯ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಆದರೆ ಯಾರಿಗೂ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಾತ್ರವಲ್ಲ, ಕೊಡಗಿನಲ್ಲಿ ಬಸ್, ಆಟೋ, ಕ್ಯಾಬ್, ಸೇರಿದಂತೆ ಹಲವು ಸಂಘಗಳು ಬಂದ್ಗೆ ಪೂರ್ಣ ಬೆಂಬಲ ನೀಡಿವೆ.