ಕಾರ್ಕಳ, ಅ.02 (DaijiworldNews/HR): ಸೇವೆ ಹಾಗೂ ಸಮರ್ಪಣಾ ಅಭಿಯಾನದ ಅಂಗವಾಗಿ ಕಾರ್ಕಳ ಬಿಜೆಪಿ ಕಾರ್ಯಾಲಯದಲ್ಲಿ ಗಾಂಧಿಜಯಂತಿ ಆಚರಿಸಲಾಯಿತು.
ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಇದೇ ಸಂಧರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಗೇರು ನಿಗಮ ಅಧ್ಯಕ್ಷರು ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಮಣಿರಾಜ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ ಸಾಲಿಯಾನ್ ಮತ್ತು ನವೀನ ನಾಯಕ್, ಕಾರ್ಯದರ್ಶಿ ಅನಂತಕೃಷ್ಣ ಶೆಣೈ, ಕೋಶಾಧಿಕಾರಿ ಪ್ರವೀಣ್ ಸಾಲಿಯಾನ್, ಪಕ್ಷದ ವಕ್ತಾರ ಸತೀಶ್ ಶೆಟ್ಟಿ ಮುಟ್ಟುಪಾಡಿ, ಪುರಸಭೆ ಉಪಾಧ್ಯಕ್ಷೆ ಪಲ್ಲವಿ ರಾವ್ ಹಾಗೂ ಪಕ್ಷದ ಪಧಾದಿಕಾರಿಗಳು ಉಪಸ್ಥಿತಿಯಲ್ಲಿದ್ದರು.