ಕುಂದಾಪುರ, ಅ.03 (DaijiworldNews/PY): ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಪ್ರಯುಕ್ತ ಕುಂದಾಪುರದ ಮಿನಿ ವಿಧಾನ ಸೌಧದ ಕಚೇರಿ ಆವರಣದಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು.
ಈ ವೇಳೆ ಮಾತನಾಡಿದ ಸಹಾಯಕ ಕಮಿಷನರ್ ರಾಜು ಕೆ, "ಈ ಸ್ವಚ್ಛತಾ ಕಾರ್ಯ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ ನಿರಂತರವಾಗಿ ನಡೆಯುವಂತಾಗಬೇಕು. ಎಲ್ಲರೂ ದಿನಾ ತಮ್ಮ ತಮ್ಮ ಮನೆ ಹಾಗೂ ಕಚೇರಿಗಳಲ್ಲಿ ಸ್ವತತಾ ಅಭಿಯಾನ ದ ಅನುಸಾರವಾಗಿ ಸ್ವಚ್ಛತಾ ಕಾರ್ಯ ನಡೆಸಬೇಕು" ಎಂದರು.
"ಕುಂದಾಪುರದ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡು ಎಲ್ಲರೂ ಭಾಗಿಯಾಗಿದ್ದು, ಈ ಕಾರ್ಯ ನಿರಂತರವಾಗಿ ನಡೆಯಲಿದೆ" ಎಂದು ತಿಳಿಸಿದರು.
ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಸಹ ಹಾರೆ, ಬುಟ್ಟಿ ಹಿಡಿದು ಸ್ವಚ್ಛತೆಯಲ್ಲಿ ಪಾಲ್ಗೊಂಡರು. ಇವರಿಗೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಾಥ್ ನೀಡಿದರು.