ಉಡುಪಿ, ನ10(SS): ತೀವ್ರ ವಿರೋಧದ ನಡುವೆಯೂ ರಾಜ್ಯದೆಲ್ಲೆಡೆ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದ್ದು, ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಟಿಪ್ಪು ಜಯಂತಿ ಆಚರಿಸಲಾಗಿದೆ.
ಸರ್ಕಾರಿ ಆದೇಶದಂತೆ ಟಿಪ್ಪು ಭಾವಚಿತ್ರಕ್ಕೆ ಹೂ ಮಾಲೆ ಹಾಕಿ ಪೂಜೆ ಸಲ್ಲಿಸಿದರು.ಈ ವೇಳೆ ಜಿಲ್ಲಾಧಿಕಾರಿ ಪ್ರಿಯಾಂಕ, ಎಸ್.ಪಿ ಲಕ್ಷ್ಮಣ ನಿಂಬರ್ಗಿ, ಎಡಿಸಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.
ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದ ಈ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವೆ ಜಯಮಾಲಾ, ಜಿಲ್ಲೆಯ ಎಲ್ಲಾ ಐವರು ಬಿಜೆಪಿ ಶಾಸಕರು, ಸಂಸದೆ ಶೋಭಾ ಕೆರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ,ಕಾಂಗ್ರೆಸ್ ಎಂ.ಎಲ್.ಸಿ ಪ್ರತಾಪ್ ಚಂದ್ರ ಶೆಟ್ಟಿ ಭಾಗವಹಿಸಿರಲಿಲ್ಲ.