ಬಂಟ್ವಾಳ, ಅ 04 (DaijiworldNews/MS): ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ, “ಅಂತ್ಯೋದಯ" ಇಲಾಖೆಗಳ ವಿವಿಧ ಯೋಜನೆಗಳ ಕುರಿತ ಅ.4ರ ಸೋಮವಾರ ಬಂಟವಾಳದ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ.ನಾರಾಯಣ ಸ್ವಾಮಿ ಅವರು ಉದ್ಟಾಟಿಸಿದರು.
ಸಂಸದರಾದ ನಳೀನ್ ಕುಮಾರ್ ಕಟೀಲ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿ ವಹಿಸಿದ್ದರು. ಶಾಸಕರಾದ ರಾಜೇಶ್ ನಾಯ್ಕ ಯು, ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಭರತ್ ಶೆಟ್ಟಿ ವೈ, ಸಂಜೀವ ಮಠಂದೂರು, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ವಿವಿಧ ಅಭಿವೃದ್ದಿ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ರೈ ಬೋಳಿಯಾರ್, ನಿತೀನ್ ಕುಮಾರ್, ಪ್ರೋ. ಲಿಂಗಣ್ಣ, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್. ನಾಗಾಂಬಿಕ ದೇವಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಯೋಗೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಡಾ. ಹೇಮಲತಾ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ, ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.