ಕಾಸರಗೋಡು, ಅ.04 (DaijiworldNews/HR): ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1488 ಪ್ಯಾಕೆಟ್ ಮದ್ಯವನ್ನು ಕಾಸರಗೋಡು ಪೊಲೀಸರು ವಶಪಡಿಸಿಕೊಂಡಿದ್ದು, ಕಾರಲ್ಲಿದ್ದವರು ಪರಾರಿಯಾಗಿದ್ದಾರೆ.
ನಗರದ ಅಮೈ ಕಾಲನಿ ಸಮೀಪದಿಂದ ವಶಪಡಿಸಿಕೊಳ್ಳಲಾಗಿದೆ.
ಪೊಲೀಸರನ್ನು ಕಂಡು ಕಾರು ಸಹಿತ ಪರಾರಿಯಾಗಿದ್ದು, ಬೆನ್ನಟ್ಟಿದಾಗ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಕಾರನ್ನು ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.