ಮಂಗಳೂರು, ನ 10(SM): ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯ ಎಂ.ಎಸ್. ಮಹಮ್ಮದ್ ಹರಿಹಾಯ್ದ ಘಟನೆ ನಡೆದಿದೆ.
ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ತೀವ್ರ ವಿರೋಧದ ನಡುವೆ ಇಂದು ರಾಜ್ಯ ಸರಕಾರ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಪೊಲೀಸ್ ಬಿಗು ಭದ್ರತೆಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಯೋಜನೆ ಮಾಡಲಾಗಿತ್ತು.
ಈ ನಡುವೆ, ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರು ಮಾತ್ರವೇ ಭಾಗವಹಿಸಿದ್ದರು. ಸಭಾಂಗಣದಲ್ಲಿ ಹಲವು ಖುರ್ಚಿಗಳು ಖಾಲಿ ಇದ್ದವು. ಇದರಿಂದ ಆಕ್ರೋಶಗೊಂಡ ಎಂ.ಎಸ್. ಮಹಮ್ಮದ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.