ಮಂಗಳೂರು, ಅ 05 (DaijiworldNews/MS): ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಮ್ಯಾನ್ ಹ್ಯಾಡ್ಲಿಂಗ್ ಮಾಡಿದ್ದಾರೆ. ನಮ್ಮ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ ಇದು ಭಾರತದ ಸಂಸ್ಕೃತಿಗೆ ಅವಮಾನ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುಳ್ಯ ಕೋರ್ಟ್ ಗೆ ಹಾಜರಾಗಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಳು ಮಾಧ್ಯಮದೊಂದಿಗೆ ಮಾತನಾಡಿದ ಅವರು, " ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ.
ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಇದಕ್ಕೆ ಕಾರಣರಾದವರನ್ನು ಬಂಧಿಸಿಲ್ಲ, ಮಂತ್ರಿ ರಾಜೀನಾಮೆ ನೀಡಿಲ್ಲ, ಇದು ಒಂದು ಸರ್ಕಾರನಾ? ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ’ ಎಂದು ಬೇಸರ ವ್ಯಕ್ತಪಡಿಸಿದರು .
ಬ್ರಿಟೀಷರಿಗಿಂತ ಹೀನಾಯವಾಗಿ ನಡೆದುಕೊಂಡಿದ್ದಾರೆ. ಗಾಂಧೀಜಿಯವರು ಬದುಕಿದ್ದರೆ ಏನು ಹೇಳುತ್ತಿದ್ದರು, ಏನು ಮಾಡುತ್ತಿದ್ದರು ಎಂದು ಅರ್ಥ ಆಗ್ತಿಲ್ಲಈ ದೇಶಕ್ಕೆ ಗಾಂಧಿ ಕುಟುಂಬ ಎಲ್ಲಾ ವರ್ಗದ ಜನರಿಗೆ ನ್ಯಾಯ ಕೊಡಿಸಿದ್ದಾರೆ.ಯು.ಪಿ ಪೊಲೀಸರಿಗೆ ಇವರ್ಯಾರು ಹೆದರಲ್ಲನಾವೆಲ್ಲಾ ಅವರ ಪರವಾಗಿ ನಿಲ್ತೇವೆ, ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ
ಬಿಜೆಪಿಯವರದ್ದು ಯಾಕೋ ಜಾಸ್ತಿಯಾಗ್ತಿದೆ.ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾಗುತ್ತಿದೆ, ಬಿಜೆಪಿ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡ್ತಿದ್ದಾರೆಪೊಲೀಸರ ಅಧಿಕಾರವನ್ನು ಕಾರ್ಯಕರ್ತರಿಗೆ ಕೊಟ್ಟು ಬಿಟ್ಟಿದ್ದಾರೆ.ಬಹಿರಂಗವಾಗಿಯೇ ನಮ್ಮ ಕಾರ್ಯಕರ್ತರಿಗೆ ಹೊಡೆಯೋದಾಗಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.