ಮಂಗಳೂರು, ಅ 06 (DaijiworldNews/MS): ಸರಕಾರದ ಆದೇಶದಂತೆ ಬೆಳಕು ಮೀನುಗಾರಿಕೆ ಮತ್ತು ಬುಲ್ಟ್ರಾಲ್ ಮೀನುಗಾರಿಕೆ, ಅವೈಜ್ಞಾನಿಕವಾಗಿ ಪಚ್ಚಿಲೆ ಮೀನುಗಾರಿಕೆ, ಚೌರಿ ಮತ್ತು ಪ್ಲಾಸ್ಟಿಕ್ ಬಳಸಿ ಅನಧಿಕೃತವಾಗಿ ಕಪ್ಪೆ ಬಂಡಸನ್ನು ಹಿಡಿಯುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ಪದ್ಧತಿಗಳಲ್ಲಿ ಮೀನುಗಾರಿಕೆ ಮಾಡುವುದು ಕಂಡು ಬಂದಲ್ಲಿ ಸಂಬಂಧಿಸಿದ ಮೀನುಗಾರಿಕಾ ದೋಣಿಗಳ ಲೈಸನ್ಸ್ ರದ್ದುಪಡಿಸಲಾಗುವುದು ಹಾಗೂ ಅವರಿಗೆ ನೀಡುವ ಕರರಹಿತ ಡೀಸೆಲ್ ಸೌಲಭ್ಯವನ್ನು ತಡೆಹಿಡಿಯಲಾಗುವುದು. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರಂತೆ ಸಂಬಂಧಿಸಿದ ದೋಣಿಗಳು ಹಿಡಿದ ಮೀನಿನ 5 ಪಟ್ಟು ದರದಲ್ಲಿ ದಂಡ ವಸೂಲು ಮಾಡಲಾಗುವುದು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.