ಉಳ್ಳಾಲ, ಅ 08 (DaijiworldNews/MS): ಗ್ರಾಮಪಂಚಾಯತ್ ಹಿರಿಯ ಸದಸ್ಯರೊಬ್ಬರು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಲೈಂಗಿಕ ಕಿರುಉಳ ನೀಡಿದ್ದಾರೆ ಎಂದು ಆರೋಪಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಧ್ಯಕ್ಷರ ಕೊಠಡಿಯಲ್ಲಿ ಸಿಸಿ ಟಿವಿ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಸದಸ್ಯನನ್ನು ಬಂಧಿಸಿದ್ದಾರೆ.
ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್ಗೆ ಅರ್ಜಿ ನೀಡಲೆಂದು ಮುನ್ನೂರು ಗ್ರಾಪಂಗೆ ತೆರಳಿದ್ದರು. ಈ ವೇಳೆ ಪ್ರಕರಣದ ಆರೋಪಿ ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿಅನುಚಿತವಾಗಿ ವರ್ತಿಸಿದ್ದು ಘಟನೆ ನಡೆದು 20 ದಿನಗಳ ಬಳಿಕ ದೂರು ದಾಖಲಿಸಿದ್ದು, ಮಹಿಳೆ ನೀಡಿದ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.
ಈ ವೇಳೆ ಆರೋಪಿ ಬಾಬು ಅವರನ್ನು ಅಧ್ಯಕ್ಷರ ಕೊಠಡಿಗೆ ಕರೆಸಿ ಕಿರುಕುಳ ನೀಡಿದ ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಫ್ಐ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು. ಪಂಚಾಯತ್ ನ ಬೇರೆ ಯಾವುದೋ ಘಟನೆಗೆ ಸಂಬಂಧಿಸಿದಂತೆ ಸಿ.ಸಿ ಟಿವಿ ಪರಿಶೀಲಿಸುತ್ತಿರುವಾಗ ಈ ಘಟನೆ ಬೆಳಕಿಗೆ ಬಂದಿದೆ. ಇದೀಗ ಮಹಿಳೆ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.