ಮಂಗಳೂರು, ಅ 08 (DaijiworldNews/MS): ರಾಷ್ಟ್ರಪತಿ ರಾಮನಾಥ್ ಕೊವೀಂದ್ ಅವರು ಶೃಂಗೇರಿ ಭೇಟಿಗಾಗಿ ಇಂದು ಸಂಜೆ ಮಂಗಳೂರಿಗೆ ಆಗಮಿಸಿ ನಗರದ ಸರ್ಕಿಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿರುವ ಹಿನ್ನಲೆಯಲ್ಲಿ ನಗರದಾದ್ಯಂತ ಕಟ್ಟೆಚ್ಚರವಹಿಸಲಾಗಿದ್ದು, ರಾಷ್ಟ್ರಪತಿಗಳ ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಲಾಗಿದೆ.
ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ (ಅ.8) 11 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್ ನಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಮಾರ್ಗ ಬದಲಾವಣೆ:
1)ಕೆಪಿಟಿ ಕಡೆಯಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್-ಬಟ್ಟಗುಡ್ಡೆ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ನಂತೂರು ಜಂಕ್ಷನ್ ಮೂಲಕ ನಗರ ಪ್ರವೇಶಿಸುವುದು.
2) ಕೆಎಸ್ಆರ್ ಟಿಸಿ , ಬಿಜೈ ಬಟ್ಟಗುಡ್ಡೆ ಕಡೆಯಿಂದ ಕೆಪಿಟಿ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸುವ ವಾಹನಗಳು ಕುಂಟಿಕಾನ ಮುಖಾಂತರ ರಾಷ್ಟ್ರೀಯ ಹೆದ್ದಾರಿ ಕಡೆಗೆ ಚಲಿಸುವುದು.
2)ಬಂಟ್ಸ್ ಹಾಸ್ಟೆಲ್ ಸರ್ಕಲ್, ಕದ್ರಿ ಕಂಬಳ ರಸ್ತೆ, ಬಿಜೈ ಬಟ್ಟಗುಡ್ಡೆ ಮುಖಾಂತರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೆಪಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಂಟ್ಸ್ ಹಾಸ್ಟೆಲ್ ಸರ್ಕಲ್ ಮಲ್ಲಿಕಟ್ಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಂತೂರು ಜಂಕ್ಷನ್ ಮುಖಾಂತರ ಮುಂದುವರಿಯಲು ಸೂಚಿಸಲಾಗಿದೆ