ಮಂಗಳೂರು, ಅ. 07 (DaijiworldNews/SM): ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ.
ಶೃಂಗೇರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ರಾಷ್ಟ್ರಪತಿಯವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಬಳಿಕ ರಸ್ತೆ ಮಾರ್ಗದ ಮೂಲಕ ಅವರು ಸರ್ಕ್ಯೂಟ್ ಹೌಸ್ ಗೆ ತೆರಳಿದ್ದು, ಅಲ್ಲಿ ಇಂದು ತಂಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಶೃಂಗೇರಿಗೆ ಪ್ರಯಾಣ ಬೆಳೆಸಲಿದ್ದಾರೆ.