ಬಂಟ್ವಾಳ, ಅ.09 (DaijiworldNews/PY): ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯಲ್ಲಿ ನಡೆದಿದೆ. ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಪ್ರಕರಣದ ಬಗ್ಗೆ ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆ ಪ್ರಕರಣವನ್ನು ಬಂಟ್ವಾಳ ಪೊಲೀಸರು ಗಂಭೀರ ಪರಿಗಣಿಸಿದ್ದು, ಗ್ಯಾಂಗ್ ರೇಪ್ ಪ್ರಕರಣ ದಾಖಲಾಗುವ ಸಾಧ್ಯತೆಯ ಬಗ್ಗೆ ಮೂಲಗಳು ತಿಳಿಸಿದೆ.
ಬಾಲಕಿಯನ್ನು ಆರೋಪಿಗಳು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಬಾಲಕಿಯ ಹೇಳಿಕೆಯ ಪ್ರಕಾರ, ಅ.8ರ ಶುಕ್ರವಾರ ಬೆಳಗ್ಗೆ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಒಂದು ಬಿಳಿ ಕಾರಿನಲ್ಲಿ ಬಂದ ಅಪರಿಚಿತ ಇನ್ನಿತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಶೀಘ್ರವೇ ಬಂಧಿಸುವ ಸಾಧ್ಯತೆ ಇದೆ.
ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು, ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ.