ಕಾಪು, ಅ.09 (DaijiworldNews/PY): ಟೆಂಪೋವೊಂದು ಡಿವೈಡರ್ಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರ ಸೇತುವೆ ಬಳಿ ಶನಿವಾರ ನಡೆದಿದೆ.
ಘಟನೆಯಲ್ಲಿ ಟೆಂಪೋ ಚಾಲಕನಿಗೆ ಕೈ ಮುರಿದಿದ್ದು, ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಟೆಂಪೋ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಧಾವಿಸಿದ್ದು, ಸಂಚಾರ ಸುಗಮಗೊಳಿಸಿದ್ದಾರೆ.