ಮಂಗಳೂರು, ಅ.10 (DaijiworldNews/PY): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಇಂದು (ಅ.10) ಸಂಜೆ 6ಗಂಟೆಗೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.
ಮಂಗಳೂರು ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ.7ರಂದು ಸಂಭ್ರಮದ ಚಾಲನೆ ನೀಡಲಾಗಿತ್ತು.
ಮೂರು ದಿನಗಳಲ್ಲಿ ಸಾವಿರಾರು ಮಂದಿ ದಸರಾ ಮಹೋತ್ಸ ವೀಕ್ಷಣೆ ಮಾಡಿದ್ದು, ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದಾರೆ.
ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿ ಅವರು ಸಂಜೆ 5.45ಕ್ಕೆ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸಿ ನಾನಾ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.