ಕೊಣಾಜೆ, ಅ. 11 (DaijiworldNews/SM): ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣಾಜೆ ಪೋಲಿಸರು ಬಂಧಿಸಿ ಕೇಸು ದಾಖಲಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಿತೇಶ್ ಶೆಟ್ಟಿ, ಶರತ್ ಗಟ್ಟಿ ಹಾಗೂ ಚಿತ್ತರಂಜನ್ ಎಂಬವರೆಂದು ಗುರುತಿಸಲಾಗಿದೆ. ಕೊಣಾಜೆ ಪೇಟೆಯಲ್ಲಿ ಅಂಗಡಿಗೆ ಬಂದಿದ್ದ 12 ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಆರೋಪಿ ಉಸ್ಮಾನ್ ಎಂಬಾತನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಆದರೆ ಪೊಲೀಸರ ಬಂಧನಕ್ಕೆ ಮುಂಚೆ ಈ ಮೂವರು ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿದೂರು ದಾಖಲಾಗಿತ್ತು. ಬಳಿಕ ಪೊಲೀಸರು ಈ ಮೂವರ ವಿರುದ್ದ ಪ್ರಕರಣ ದಾಖಲಿಸಿ ಜಾಮೀನಿನ ಮೂಲಕ ಬಿಡುಗಡೆಗೊಳಿಸಿದ್ದಾರೆ.