ಕಾಸರಗೋಡು, ಅ.12 (DaijiworldNews/HR): ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಅಪಾಯಕಾರಿ ಯಾಗಿರುವ ಮರಗಳನ್ನು ತೆರೆವುಗೊಳಿಸುವಂತೆ ಸೂಚನೆ ನೀಡಿದರು. ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳುವಂತೆ ಅರಣ್ಯ ಇಲಾಖೆ, ಅಗ್ನಿಶಾಮಕ ದಳಕ್ಕೆ ಆದೇಶ ನೀಡಿದರು. ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರ ಪಡೆಯಲಾಗುವುದು. ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳುವಂಯೇ ಕಂದಾಯ ಅಧಿಕಾರಿ ಹಾಗೂ ಉಪ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ರಾತ್ರಿ ಪ್ರಯಾಣವನ್ನು ಸ್ಥಗಿತ ಗೊಳಿಸಬೇಕು. ಚಂದ್ರಗಿರಿ, ಪಯಸ್ವಿನಿ, ತೇಜಸ್ವಿನಿ ನದಿಗಳು ಉಕ್ಕಿ ಹರಿಯುತ್ತಿದ್ದು, ಇದರಿಂದ ತಗ್ಗು ಪ್ರದೇಶ ಜಲಾವೃತ ಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಬೇಕು. ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಆನ್ ಲೈನ್ ಆಗಿ ತುರ್ತು ಸಭೆ ಕರೆಯುವಂತೆ ಆದೇಶ ನೀಡಿದರು.
ಇನ್ನು ಜಿಲ್ಲಾ ಮಟ್ಟದ ಕಂಟ್ರೋ ಲ್ ರೂಂ ( ದೂರವಾಣಿ : 04994 - 257700)ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.