ಮಂಗಳೂರು, ಅ 14 (DaijiworldNews/MS): ಕಾವೂರು ಠಾಣೆ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರ ಬೆನ್ನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.
ಪಂಜಿಮೊಗರು ನಿವಾಸಿ ರಾಜೇಶ್ (45) ಇರಿತಕ್ಕೊಳಗಾದವರು. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಕೊಟ್ಟಾರದಿಂದ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.