ಮಂಗಳೂರು, ಅ 14 (DaijiworldNews/MS): ಕಚೇರಿಯ ಸಿಬ್ಬಂದಿ ಓರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ದಾಖಲಾದ ದೂರಿನ್ವಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ (47) ನನ್ನು ಅ.13 ರ ರಾತ್ರಿ 10ಗಂಟೆಗೆ ಪೊಲೀಸರು ಬಂಧಿಸಿದ್ದಾರೆ.
ಕಚೇರಿಯ ಸಿಬ್ಬಂದಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಎಂದು ಫಾರೂಕ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ದೂರಿನ ಆಧಾರದಲ್ಲಿ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ.