ಮಂಗಳೂರು, ಅ 15 (DaijiworldNews/MS): ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನ ಆರ್ಭಟ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಮೆಯಾಗಿದೆ. ಕೋವಿಡ್ ಎರಡನೇ ಅಲೆಯ ತೀವ್ರತೆ ತಗ್ಗಿದ್ದು, ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.46 ಇದ್ದು, ಚಿತ್ರಮಂದಿರ, ರಂಗಮಂದಿರ, ಮಲ್ಟಿಫ್ಲೆಕ್ಸ್ , ಥಿಯೇಟರ್ ಅಡಿಟೋರಿಯಂ ಗಳಲ್ಲಿ 100% ಆಸನ ಭರ್ತಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ರೇಟ್ 1 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟ ಸೀಟು ಭರ್ತಿಗೆ ಅವಕಾಶ ನೀಡಲಾಗಿತ್ತದರೂ ಪಾಸಿಟಿವಿಟಿ ದರ ಹೆಚ್ಚಿರುವ ಹಿನ್ನಲೆ ಹಾಗೂ ಗಡಿ ಜಿಲ್ಲೆಯಾಗಿರುವ ಕಾರಣ 100% ಆಸನ ಭರ್ತಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ
ಜಿಲ್ಲೆಯಲ್ಲಿ ಅ. 14ರಿಂದ ಕಡ್ಡಾಯ ಕೊವೀಡ್ ನಿಯಮ ಪಾಲನೆ ಷರತ್ತು , ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಚಿತ್ರಮಂದಿರಗಳಲ್ಲಿ ಪ್ರವೇಶ ಅವಕಾಶವಿರುತ್ತದೆ. ಇಂತಹ ಸ್ಥಳಗಳಿಗೆ ಗರ್ಭಿಣಿಯರು ಮತ್ತು ಹಿರಿಯ ನಾಗರೀಕರು ಹಾಗೂ ಮಕ್ಕಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ಪ್ರಕಟನೆಯಲ್ಲಿ ಸಲಹೆ ನೀಡಲಾಗಿದೆ.