ವಿಟ್ಲ, ನ 13(SM): ಇಡ್ಕಿದು ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇಡ್ಕಿದು ಗ್ರಾಮದ ಕೋಲ್ಪೆ ನಿವಾಸಿ ಇಸಾಕ್(31) ಬಂಧಿತ ಆರೋಪಿ.
ಈತ ನವಂಬರ್ ೧11ರಂದು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 14 ವರ್ಷದ ಬಾಲಕಿಯನ್ನು ತಡೆದು ನಿಲ್ಲಿಸಿ, ಆಕೆಯ ಕೈ ಎಳೆದು ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ತನ್ನ ಮನೆಯಲ್ಲಿ ವಿಚಾರ ತಿಳಿಸಿದ್ದು, ಸೋಮವಾರ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಪೊಲೀಸರು ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಟ್ಲ ಎಸೈ ಯಲ್ಲಪ್ಪ ನೇತೃತ್ವದ ತಂಡ ಸೂರ್ಯ ಎಂಬಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಸಿದೆ.