ಕಾಸರಗೋಡು,ಅ 18(DaijiworldNews/MS): ಎರಡೂವರೆ ವರ್ಷದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಹೆಣ್ಣು ಮಗುವಿನ ಮೃತ ದೇಹ ಮನೆಯ ಸಮೀಪದ ಹಿತ್ತಿಲಿನಲ್ಲಿರುವ ಬಾವಿಯಲ್ಲಿ ಅ.18ರ ಸೋಮವಾರ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ
. ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ರಮ್ಯಾ ಕೆಲ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೂಲತ: ಕೊಲ್ಲಂ ನಿವಾಸಿಯಾಗಿರುವ ಪ್ರತೀಷ್ ಪತಿಯಾಗಿದ್ದು, ನೀಲೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ