ಉಡುಪಿ,ನ 14 ( MSP): ಉಡುಪಿ ಜಿಲ್ಲೆಯೂ ಘನ, ದ್ರವ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡುವುದಲ್ಲಿ ದೇಶಕ್ಕೆ ಮಾದರಿಯಾಗಿದೆ. ದೇಶದಲ್ಲಿ ಪ್ರಪ್ರಥಮ ಬಾರಿಗೆ ಘನ, ದ್ರವ ತ್ಯಾಜ್ಯದ ನಿರ್ವಹಣೆ ಈ ಪ್ರಯತ್ನಕ್ಕೆ ಮುಂದಾಗಿರುವ ಜಿಲ್ಲಾಡಳಿತದ ಕ್ರಮ ಅಭಿನಂದನೀಯ ಎಂದು ಪಶ್ಚಿಮ ಬಂಗಾಳದ ಮಾಲಿನ್ಯ ನಿಯಂತ್ರಣ ಇಲಾಖೆಯ ಕಾರ್ಯದರ್ಶಿ ಎಸ್.ವಿ ಮುಖರ್ಜಿ ತಿಳಿಸಿದರು.
ಮಂಗಳವಾರ ವಾರಂಬಳ್ಳಿ, ವಂಡ್ಸೆ, ನಿಟ್ಟೆ ಘನ–ದ್ರವ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಪಶ್ಚಿಮ ಬಂಗಾಳದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ನಿಯೋಗ ಭೇಟಿನೀಡಿದ, ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ಈ ವಿಚಾರ ತಿಳಿಸಿದರು.
ಇಲ್ಲಿ ತ್ಯಾಜ್ಯವನ್ನು ನೈಸರ್ಗಿಕ ವಿಧಾನದ ಮೂಲಕ ನಿರ್ವಹಣೆ ಮಾಡುವ ರೀತಿ ಮತ್ತು ಆ ಮೂಲಕ ಆದಾಯ ಹಾಗೂ ಉದ್ಯೋಗ ಸೃಷ್ಟಿ ಮಾಡುತ್ತಿರುವ ಕ್ರಮ ಪ್ರಶಂಶನೀಯ ಇದನ್ನು ನೋಡಿ ಇತರ ಜಿಲ್ಲೆ ಹಾಗೂ ರಾಜ್ಯಗಳು ಇದನ್ನು ಅನುಸರಿಸಬೇಕು. ಇದರಿಂದಾಗಿ ಬಹುಕಾಲದ ತ್ಯಾಜ್ಯ ನಿರ್ವಹಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.
ನೈಸರ್ಗಿಕ ವಿಧಾನದ ಮೂಲಕ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಆದಾಯ ಹಾಗೂ ಉದ್ಯೋಗ ಸೃಷ್ಟಿ ಮಾಡುತ್ತಿರುವ ಕ್ರಮ ಶ್ಲಾಘನೀಯ. ಇತರೆ ರಾಜ್ಯಗಳು ಇಲ್ಲಿನ ಅನುಸರಿಸಬೇಕು. ಇದರಿಂದಾಗಿ ಬಹುಕಾಲದ ತ್ಯಾಜ್ಯ ನಿರ್ವಹಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು. ಯಶಸ್ವಿಯಾಗಿ ಅನುಷ್ಟಾನಗೊಂಡು ಕಾರ್ಯನಿರ್ವಹಿಸುತ್ತಿರುವ ಘನ–ದ್ರವ ಸಂಪನ್ಮೂಲ ನಿರ್ವಹಣೆ ಯೋಜನೆಯ ಮಾಹಿತಿ ಪಡೆಯಲು ಹಾಗೂ ಬೇರೆ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ಪೂರಕವಾಗಿ ಮಾಹಿತಿ ನೀಡಲು ಪಶ್ಚಿಮ ಬಂಗಾಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ನಿಯೋಗವು ವಂಡ್ಸೆ, ವಾರಂಬಳ್ಳಿ ಹಾಗೂ ನಿಟ್ಟೆ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿತು.
ಈ ಸಂದರ್ಭ ಪರಿಸರ ಇಲಾಖೆಯ ಲಕ್ಷ್ಮೀಕಾಂತ್, ಕಾಡೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್,ನಗರಸಭೆ ಪರಿಸರ ಅಭಿಯಂತರ ರಾಘವೇಂದ್ರ, ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ವಾರಾಂಬಳ್ಳಿ ಪಂಚಾಯಿತಿ ಅಧ್ಯಕ್ಷ ನವೀನ್ಚಂದ್ರ ನಾಯಕ್ ಮುಂತಾದವರು ಉಪಸ್ಥಿತರಿದ್ದರು.